ಐಪಿಎಲ್ 2024 68 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಸೋಲಿಸಿ ಭರ್ಜರಿ ಜಯಗಳಿಸಿದೆ. ಈ ಮೂಲಕ ಆರ್ಸಿಬಿ ಪ್ಲೇ ಆಫ್ಗೆ ರಾಯಲ್ ಎಂಟ್ರಿ ಕೊಟ್ಟಿದೆ. ಆರ್ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಬೆಂಗಳೂರು ತಂಡದ ಅಭಿಮಾನಿಗಳು ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಸಿಬಿ ಗೆಲುವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಸತತ 6 ನೇ ಗೆಲುವಿನೊಂದಿಗೆ ಆರ್ಸಿಬಿ ಪ್ಲೇಆಫ್ ರೌಂಡ್ಗೆ ಲಗ್ಗೆ ಇಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ಪ್ರತಿಕ್ಷಣವನ್ನು ಆನಂದಿಸಿದೆ. ಆರ್ಸಿಬಿ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಖುಷಿ ನೀಡಿದೆ. ಇದು ನಮ್ಮ ಆರ್ಸಿಬಿ ತಂಡದ ಹೊದ ಅಧ್ಯಾಯ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.