ರಾಜ್ಯದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕಲ್ಪಿಸುವ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾಡಳಿತ “ಜೀವನ ಸಂಗಮ” ಪೋರ್ಟಲ್ ಅನ್ನು ಆರಂಭಿಸಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿಯನ್ನು ಆರಿಸಲು ಹಾಗೂ ಹೆಚ್ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದೆ, ಎಲ್ಲಾ ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಅರ್ಹ ಯುವಕ ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಾಗುವುದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ ಎಂದು ಪ್ರಕಟಣೆ ನೀಡಲಾಗಿದೆ.