KIOCL Recruitment 2024: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅರ್ಜಿ ಹಾಕಿ. ನವೆಂಬರ್ 10, 2024 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 48 ವರ್ಷ ಮೀರಿರಬಾರದು.
ವೇತನ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 1 ಲಕ್ಷ-2.60 ಲಕ್ಷ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಮುಖ್ಯ ಜನರಲ್ ಮ್ಯಾನೇಜರ್ (HR)
ಮಾನವ ಸಂಪನ್ಮೂಲ ಇಲಾಖೆ
KIOCL ಲಿಮಿಟೆಡ್
ಕೋರಮಂಗಲ 2ನೇ ಬ್ಲಾಕ್
ಸರ್ಜಾಪುರ ರಸ್ತೆ
ಬೆಂಗಳೂರು-560034
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/10/2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 10, 2024(ಇಂದು)
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 18, 2024