ಬೆಂಗಳೂರು : ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.