ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರೆದಿದೆ. ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ- ಢಾರವಾಡ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ನಗರದ ಮುಖ್ಯ ರಸ್ತೆಗಳಿಗೆ ನೀರು ನುಗ್ಗಿದ್ದು, ಮಳೆಯಿಂದ ವಾಹನ ಸವಾರರ ಪರದಾಡುವ ಪರಿಸ್ಥಿತಿ ಉಂಟಾಗಿದೆ.