ಬೆಂಗಳೂರಿನಲ್ಲಿ ಈಸ್ಟರ್ನ್ ವೇವ್ಸ್ ಎಫೆಕ್ಟ್ ತಟ್ಟಿದ್ದು, ಶ್ರೀಲಂಕಾದ ಪೂರ್ವಾ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ದಕ್ಷಿಣ ಭಾರತದ ರಾಜ್ಯಗಳ ಮೇಲೂ ಎಫೆಕ್ಟ್ ತಟ್ಟಲಿದ್ದು, ಹಲವೆಡೆ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಂಜಿನ ವಾತಾವರಣ ಇದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ದಟ್ಟ ಮಂಜು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಭಾಗ ಮತ್ತು ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಕರ್ನಾಟಕದ ಒಳಭಾಗದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 21ರಿಂದ ಜನವರಿ 25ರವರೆಗೆ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಮುಸುಕಿನ ವಾತಾವರಣ ಕಂಡು ಬರಲಿದೆ ಮತ್ತು ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನಿನ್ನೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿತ್ತು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಇತ್ತು. ಜೊತೆಗೆ ನಿನ್ನೆ ಸಂಜೆ ವೇಳಗೆ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆ ಸಿಡಿಲು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ; https://whatsapp.com/channel/0029VafyCqRFnSzHn1JWKi1B