- ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂದು ಆತ್ನಹತ್ಯೆ
- ಮನೆಯಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ.
- ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂದು ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಆತ್ಮಹತ್ಯೆಗೆ ಶರಣಾದ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಈಕೆ ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸುವಿತ್ತು ಎನ್ನಲಾಗಿದೆ.. ಇಂದು ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆಯಾಗಿದ್ದು, ಮನೆಯಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ.
ಇನ್ನು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.