ಕೇರಳದ ವಯನಾಡಿನಲ್ಲಿ ಭೀಕರ ಗುಡ್ಡ ಕುಸಿತ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೇರಳಕ್ಕೆ ಸಹಾಯಹಸ್ತ ನೀಡಲು ಮುಂದಾಗಿದ್ದಾರೆ. ನೆರೆಯ ಕೇರಳಕ್ಕೆ ಕರ್ನಾಟಕ ಸರ್ಕಾರ ಎಲ್ಲ ಅಗತ್ಯ ನೆರವು ನೀಡುತ್ತೇವೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇರಳದ ವಯನಾಡಿನಲ್ಲಿ ಭೀಕರ ಗುಡ್ಡ ಕುಸಿತದಿಂದ 70ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸುಮಾರು 400ಕ್ಕೂ ಹೆಚ್ಚಿನ ಜನ ನಾಪತ್ತೆಯಾಗಿದ್ದಾರೆ. ಈ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಈ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕೇರಳಕ್ಕೆ ಅಗತ್ಯ ನೆರವು ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದರು.