ಬೆಂಗಳೂರು : ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಪಿ ನಂಜುಂಡಿ ಇಂದು ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕೆ.ಪಿ.ನಂಜುಂಡಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಬಿಜೆಪಿ ಪಕ್ಷ ನನ್ನನ್ನು ವಿಧಾನ ಪರಿಷತ್ ಸದಸ್ಯನ್ನಾಗಿ ಮಾತ್ರ ಸೀಮಿತವಾಗಿರಿಸಿತ್ತು ಎನ್ನುವ ಮೂಲಕ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ನಿನ್ನೆಯಷ್ಟೇ ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಅವರ ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದರು.