ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿರುವ ಸೌಮ್ಯರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.
ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಅವರಿಗೆ ಸಿಹಿ ಹಂಚಿ, ಹೂ ಗುಚ್ಛ ನೀಡಿ ಆಶೀರ್ವಾದ ಪಡೆದರು.
ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಉಪಸ್ಥಿತರಿದ್ದರು.