ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೆಪಿಎಸ್ಸಿ ಮೂಲಕ ಆಗಸ್ಟ್ 27 ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಗುಂಪೊಂದು ಲಾಭಿ ನಡೆಸುತ್ತಿದೆ.
ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.