ಬೆಂಗಳೂರು: ಇತ್ತೀಚೆಗೆ ಲೈಗಿಂಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕಾಮುಕರ ಕಾಟ ಹೆಚ್ಚಾಗಿದೆ. ಇದೀಗ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬಟ್ಟೆ ಒಣಗಿ ಹಾಕುವ ಸಲುವಾಗಿ ಮಹಡಿ ಮೇಲೆ ತೆರಳಿದ್ದ ವೇಳೆ ಪೋಷಕರು ಇಲ್ಲದನ್ನು ಗಮನಿಸಿ ಮಹಡಿ ಮೇಲೆ ಹೋಗಿದ್ದ ದುರುಳ, ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಕೃತ್ಯ ಎಸಗಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇನ್ನು ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.