- ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
- ವಿಧಾನಸೌಧದಿಂದ ರಾಜ ಭವನ ಚಲೋ ನಡೆಸಿದ ಬಿಜೆಪಿ
- ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸೌಧದ ಮುಂಭಾಗ ಬಿಜೆಪಿ ಪ್ರತಿಭಟನೆ ನಡೆಸಿದರು. ಬಿಜೆಪಿಯವರು ವಿಧಾನಸೌಧದಿಂದ ರಾಜ ಭವನ ಚಲೋ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯೇಂದ್ರಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ ಸಾಥ್ ನೀಡಿದರು. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಘೋಷಣೆ ಕೂಗಿದರು.
ಇನ್ನು ಸಚಿವ ನಾಗೇಂದ್ರ ವಿರುದ್ಧ ರಾಜ್ಯಪಾಲರನ್ನು ಬಿಜೆಪಿ ನಿಯೋಗ ಭೇಟಿ ಮಾಡಿದ್ದು, ದೂರು ಸಲ್ಲಿಸಿದ್ದಾರೆ.