- ನಾನು ಆರೋಗ್ಯವಾಗಿದ್ದೇನೆ ಎಂದ ಶಾಸಕ ಶಾಮನೂರು ಶಿವಶಂಕರಪ್ಪ
- ಕಫಾ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ
- ಕುಟುಂಬಸ್ಥರ ಜೊತೆ ನಗುನಗುತ್ತಾ ಮಾತನಾಡುತ್ತಿದ್ದ ಶಾಮನೂರು ಶಿವಶಂಕರಪ್ಪ
94 ವರ್ಷ ವಯಸ್ಸಿನ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವ್ರಿಗೆ ಶುಕ್ರವಾರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಫಾ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಆಸ್ಪತ್ತ್ರೆಗೆ ಸೇರಿಸಿದ್ರು. ಬಳಿಕ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ರು. ಇದೀಗ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಸ್ಥರ ಜೊತೆ ನಗುನಗುತ್ತಾ ಮಾತನಾಡುತ್ತಿದ್ದು, ನಾನು ಆರೋಗ್ಯವಾಗಿದ್ದೇನೆ ಎಂದು ಜನರಿಗೆ ತಿಳಿಸಿದ್ದಾರೆ.