ಬೆಂಗಳೂರಿನ ಹೆಚ್ಎಎಲ್ ಮತ್ತು ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಐವರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಜೆ ವೇಳೆ ಕೆಲಸ ಮುಗಿಸಿ ಬರುತಿದ್ದವರನ್ನು ಟಾರ್ಗೆಟ್ ಮಾಡಿ ಅವರನ್ನ ಬೆದರಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದರು. ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಚ್ಎಎಲ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು, ಮಹದೇವಪುರ ಠಾಣೆ ವ್ಯಾಪ್ತಿಯಲ್ಲಿ ಒರ್ವನನ್ನ ಬಂಧಿಸಿ 80 ಸಾವಿರ ಬೆಲೆ ಬಾಳುವ ಮೊಬೈಲ್ಗಳನ್ನ ವಶಕ್ಕೆ ಪಡೆದಿದ್ದಾರೆ.