ದಲಿತರ ದುಡ್ಡು ಲೂಟಿ ಮಾಡಿರುವ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ರು. ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ರು.
ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ , ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ರವರು, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಹಾಗೂ ಹಾಲಿ ವಿಧಾನ ಪರಿಷತ್ ಶಾಸಕರಾದ ಸಿ.ಟಿ ರವಿ ರವರು ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.