ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನಿನ್ನೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ರು. ಇಂದು ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗ್ಗೆ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು ರಾಜಭವನ ಮುತ್ತಿಗೆಗೆ ಯತ್ನಿಸಿದ್ದು, ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ ಪಡೆದರು.