ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತರ ಏನು ಇಲ್ಲ. ಮುಂದೆ ಕಾನೂನು ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿ ರಾಜೀನಾಮೆ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಯವರು ಯಾವುದೇ ಕಡತಕ್ಕೆ ಸಹಿ ಹಾಕಿಲ್ಲ. ಅಧಿಕಾರ ದುರ್ಬಳಕೆ ಆಗಿಲ್ಲ ಎಂದು ನ್ಯಾಯಕ್ಕಾಗಿ ಹೈಕೋರ್ಟ್ ಹೋಗಿದ್ದೆವು. ಅದಕ್ಕೆ ವಿರುದ್ಧವಾಗ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇವೆ. ಆದರೆ ಎಲ್ಲೋ ಒಂದು ಕಡೆ ನಮಗೆ ನ್ಯಾಯ ಸಿಗಲಿಲ್ಲವೇನು ಅನ್ನಿಸುತ್ತಿದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
ಮುಖ್ಯಮಂತ್ರಿಯವರು ರಾಜೀನಾಮೆ ಕೊಡಬೇಕು. ಅಧಿಕಾರ ಬಿಟ್ಟು ಇಳಿಯಬೇಕು ಎನ್ನುವ ಮಾತುಗಳು ವಿಪಕ್ಷದವರಿಂದ ಕೇಳೀಬರುತ್ತಿದೆ. ಇದ್ಯಾವುದು ಕೂಡ ಆಗುವುದಿಲ್ಲ. ಮುಖ್ಯಮಂತ್ರಿಯವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಅನೇಕರು ಸ್ಪಷ್ಟಪಡಿಸಿದ್ದಾರೆ. ನಾನೂ ಇದೇ ಮಾತನ್ನು ಸ್ಪಷ್ಟಪಡಿಸುತ್ತೇನೆ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ರಾಜೀನಾಮೆ ನೀಡುವ ಪ್ರಮೇಯ ಬರುವುದಿಲ್ಲ ಎಂದು ತಿಳಿಸಿದರು.