ಇಂದಿನಿಂದ ಆರಂಭವಾಗಿರೋ ಹೈವೋಲ್ಟೇಜ್ ಅಧಿವೇಶದಲ್ಲಿ ಮುಡಾ, ವಾಲ್ಮೀಕಿ ಹಗರಣದ ಜೋರಾಗೇ ಸದ್ದು ಮಾಡುತ್ತಿದೆ. ಕಲಾಪದ ಮೊದಲ ದಿನವೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಮೇಲೆ ಮುಗಿಬಿದ್ದಿವೆ. ಈ ಬಗ್ಗೆ ಸದನದಲ್ಲಿ ದಾಖಲೆಗಳ ಸಮೇತ ಸುದೀರ್ಘವಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಎರಡು ಪ್ರಕರಣಗಳನ್ನು ಸಿಬಿಐ ಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಹೆದರಿಕೆಗೆ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದ್ದಾರೆ.