ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ರಾಜಭವನಕ್ಕೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಸಾರಾ ಗೋವಿಂದು, ಶಿವರಾಮೇಗೌಡ, ಕನ್ನಡ ಸಂಘಟನೆಗಳ ಮುಖಂಡರು, ಹೋರಾಟಗಾರರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.
ಮುಖ್ಯಮಂತ್ರಿಗೆ ರಾಜ್ಯಪಾಲರ ನೋಟಿಸ್ ನೀಡಿರೋದು ಒಂದು ಪಿತೂರಿಯಾಗಿದೆ. ಈ ಪಿತೂರಿಯ ಹಿಂದೆ A1 ಜೆಡಿಎಸ್ A2 ಬಿಜೆಪಿಯ ಬೆಂಬಲ ಇದ್ದು, ಪ್ರಧಾನಿ ನರೇಂದ್ರ ಮೋದಿ ಸಾಹಸ ಮಾಡಿ ಸಿದ್ದರಾಮಯ್ಯ ಸರ್ಕಾರವನ್ನ ಬಿಳಿಸಬೇಕೆಂದು ಹಲವು ವರ್ಷಗಳಿಂದ ಪಿತೂರಿ ನಡೆಸುತ್ತಿಯೆಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರನ್ನು ಆಡಳಿತದಿಂದ ಇಳಿಸೋಕೆ ರಾಜ್ಯಪಾಲರಿಗೆ ಇದೊಂದು ನೆವ ಮಾತ್ರ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಒಬ್ಬ ಪ್ರಜಾಪ್ರಭುತ್ವವಾದಿ ಕಳೆದ 40 ವರ್ಷ ಇತಿಹಾಸ ಇದೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಿಎಂ ಹುದ್ದೆಗೆ ರಾಜೀನಾಮೆ ಕೊಡಬಾರದು. ಒಂದು ವೇಳೆ ರಾಜೀನಾಮೆ ಕೊಟ್ರೆ ಅವರ ವಿರುದ್ಧ ಉಗ್ರ ಹೋರಾಟ ಮಾಡ್ತಿವಿ. ಕನ್ನಡ ಒಕ್ಕೂಟ ಅಗಸ್ಟ್ 28 ಬುಧವಾರ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆ ನಡೆಸಲಿದ್ದೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತ ಪಡಿಸಿದರು.