ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐಗೆ ವಹಿಸಬೇಕೆಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಎಕರೆ ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೈಸೂರಿನ ಕೆಸರೇ ಗ್ರಾಮದಲ್ಲಿದ್ದ 3.16 ಜಮೀನನ್ನು ಹೊಂದಿದ್ದರು. ಈ ಜಮೀನನ್ನು 2014ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಅವರು ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ 2017ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನು ನೀಡಲು ನಿರ್ಧರಿಸಲಾಯಿತು. 2021ರಲ್ಲಿ ಪ್ರತಿ ಚದರ್ ಅಡಿಗೆ 9 ಸಾವಿರ ರೂಪಾಯಿ ಬೆಲೆ ಬಾಳುವ 14 ನಿವೇಶಗಳನ್ನು ಅರ್ಹತೆಗೂ ಮೀರಿ ನೀಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಪತ್ನಿ ಅವರಿಗೆ ನೀಡಬೇಕಾಗಿದ್ದಿದ್ದು ಕೇವಲ ಎರಡೇ ನಿವೇಶನ ಎಂದು ತಿಳಿಸಿದರು.
ಇದೇ ವರ್ಷ ಏಪ್ರಿಲ್ 15 ರಂದು ಓರ್ವ ವ್ಯಕ್ತಿಗೆನೇ 42 ನಿವೇಶನ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶಗಳನ್ನು ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ತಪ್ಪು ಮಾಹಿತಿ ನೀಡಲು ಯತ್ನಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿ ಬಿದ್ದಿದೆ. ಪ್ರತಿ ಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು.