- ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್ ಜಯದೇವ ನಾಯ್ಕ ನೇಮಕ
- ಎನ್ ಜಯದೇವ ನಾಯ್ಕ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್ ಜಯದೇವ ನಾಯ್ಕ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಎನ್ ಜಯದೇವನಾಯ್ಕ್ ನಂ, 4038/9, ಬಸವೇಶ್ವರ ಬಡವಾಣೆ ದಾವಣಗೆರೆ ಇವರನ್ನು ಕಂಪನಿ ಆಕ್ಟ್ 1956, ಮಮೋರಂಡಮ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಕಲಂ 17 ರನ್ವಯ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲ್ಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.