ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಹೊಸ ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿಗರ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ ಸಾವಿರಾರು ಜನ ಸಂಚಾರ ಮಾಡುತ್ತಾರೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಹಿನ್ನೆಲೆ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ.
ಮೆಟ್ರೋ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಸರ್ಕಾರ ಒಪ್ಪಿಗೆ ನೀಡಿದ್ರೆ ಜನವರಿಯಿಂದ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಪ್ರಯಾಣ ದುಬಾರಿಯಾಗುವ ಸಾಧ್ಯತೆಯಿದೆ.