ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಬಾಲಕ ನಿರಂಜನ್ ಮೃತಪಟ್ಟಿದ್ದು, ಕೋದಂಡರಾಮಪುರ ದತ್ತಾತ್ರೇಯ ದೇಗುಲ ರಸ್ತೆಯಲ್ಲಿರುವ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದರು. ಬಾಲಕ ನಿರಂಜನ್ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಹಾಗೂ ಸ್ಥಳೀಯ ಕಾಂಗ್ರೆಸ್ ಘಟಕದಿಂದ 5 ಲಕ್ಷ ರೂ. ಒಟ್ಟಾರೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.