ಬೆಂಗಳೂರು: ಬಿಜೆಪಿಯ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ರಾಜ್ಯದ ಸಹ ಉಸ್ತುವಾರಿ ಡಾ.ಪಿ.ಸುಧಾಕರ ರೆಡ್ಡಿ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿ ನಡೆಯುತ್ತಿರುವ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯನ್ನು ದೊಡ್ಡಬಳ್ಳಾಪುರದ ಬಿಜೆಪಿ ಕಚೇರಿಯಲ್ಲಿ ಮಾಜಿ ಎಂಎಲ್ಸಿ ಹಾಗೂ ಕರ್ನಾಟಕ ಮತ್ತು ತಮಿಳುನಾಡು ಬಿಜೆಪಿ ರಾಷ್ಟ್ರೀಯ ಸಹ ಉಸ್ತುವಾರಿಯೂ ಆದ ಅವರು ಇಂದು ಪರಿಶೀಲಿಸಿದರು.
ಡಾ. ಸುಧಾಕರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಶಾಸಕ ಮತ್ತು ಬಿಜೆಪಿ ಯುವ ಮೋರ್ಚಾ (ಬಿಜೆವೈಎಂ) ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಎಂಎಂ ರಾಜ್ಯ ಕಾರ್ಯದರ್ಶಿ ಶ್ರೀಮತಿ. ವತ್ಸಲಾ, ದೊಡ್ಡಬಳ್ಳಾಪುರ ನಗರ ಅಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಮತ್ತು ಜಿಲ್ಲೆಯ ಮತ್ತು ಮಂಡಲಗಳ ಚುನಾವಣಾ ಉಸ್ತುವಾರಿ ಹೊಂದಿರುವ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಡಾ. ರೆಡ್ಡಿ ಅವರು ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಜಿಲ್ಲೆಯಲ್ಲಿ ಗುರಿಗಳನ್ನು ಪೂರ್ಣಗೊಳಿಸಲು ಪಕ್ಷದ ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಹುರುಪು, ಉತ್ಸಾಹದಿಂದ ತೊಡಗಿಸಿಕೊಳ್ಳಲು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದರು. ಸಾಧ್ಯವಾದಷ್ಟು ಬೇಗ ಎಲ್ಲಾ ಬೂತ್ಗಳು ಮತ್ತು ಮಂಡಲಗಳ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲರೂ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು ಮತ್ತು ಒಗ್ಗೂಡಿ ಕೆಲಸ ಮಾಡಬೇಕೆಂದು ಅವರು ಸೂಚಿಸಿದರು.