- ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ
- ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು
ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಕೊಲೆ ಮಾಡಿರುವ ನಡೆದ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. 37 ವರ್ಷದ ಪನ್ನಿರ್ ಸೆಲ್ವಂ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪನ್ನೀರ್ ಸೆಲ್ವಂ ಮಲ್ಲೇಶ್ವರಂನ ಎಂಡಿ ಬ್ಲಾಕ್ ನಿವಾಸಿಯಾಗಿದ್ದು, ನಿನ್ನೆ ಸಂಜೆ ಕೆಸಿ ಜನರಲ್ ಆಸ್ಪತ್ರೆ ಪಾರ್ಕ್ ನಲ್ಲಿ ಕೊಲೆ ನಡೆದಿದೆ. ಆರೋಪಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪನ್ನೀರ್ ಸೆಲ್ವಂ ಎಂಬುವವರು ಗಾರೆ ಕೆಲಸ ಮಾಡಿಕೊಂಡಿದ್ದನು. ಹೆಂಡತಿ, ನಾಲ್ಕು ಚಿಕ್ಕ ಮಕ್ಕಳ ಜೊತೆ ವಾಸವಾಗಿದ್ದ. ನಿನ್ನೆ ಸಂಜೆ ಪಾರ್ಕ್ ಬಳಿ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಆರೋಪಿಗಳು ಪನ್ನೀರ್ ಸೆಲ್ವಂ ಮೇಲೆ ಹಲ್ಲೆ ನಡೆಸಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.