- ಪೋಕ್ಸೋ ಕೇಸ್ ವಿಚಾರಣೆಗೆ ಹಾಜರಾಗಿದ್ದ ಬಿ. ಎಸ್ ಯಡಿಯೂರಪ್ಪ
- ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಇಂದು ಸತತ 2 ಗಂಟೆ ವಿಚಾರಣೆ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆ ಎದುರಿಸಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಸತತ 2 ಗಂಟೆ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಪುನೀತ್ ವಿಚಾರಣೆ ನಡೆಸಿದ್ದು, ಹಲವು ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ವಿಚಾರಣೆ ಮುಗಿದ ಬಳಿಕ ಬಿಎಸ್ವೈ ಸಿಐಡಿ ಕಚೇರಿಯಿಂದ ಅವರ ನಿವಾಸಕ್ಕೆ ತೆರಳಿದ್ದಾರೆ.