ಕಾಂಗ್ರೆಸ್ ವಕ್ತಾರೆ, ರಾಜಕಾರಣಿ ಭವ್ಯ ನರಸಿಂಹಮೂರ್ತಿ ಅವರು ಭಾರತೀಯ ಸೇನೆಯ ಟೆರಿಟೋರಿಯಲ್ ಆರ್ಮಿಯಲ್ಲಿ ಕಮಿಷನರ್ ಆಫೀಸರ್ ಆಗಿದ್ದಾರೆ.
ದೇಶದ ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ ಎಂದು ಭವ್ಯ ಅವರು ಹೆಮ್ಮೆಯಿಂದ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಸಲ್ಲಿಸುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶದ ರಕ್ಷಣೆ ಮಾಡಲು ಸದಾ ಸಿದ್ಧರಿದ್ದೇನೆ. ನಿಮ್ಮೆಲ್ಲರ ಪ್ರೀತಿ ಅಭಿಮಾನ ಹಾಗೂ ಆಶೀರ್ವಾದ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಭವ್ಯ ನರಸಿಂಹಮೂರ್ತಿ ಮನವಿ ಮಾಡಿದ್ದಾರೆ.