- ಪ್ರಜ್ವಲ ರೇವಣ್ಣ ನ್ಯಾಯಾಂಗ ಬಂಧನ
- ಜುಲೈ 8.ರವರೆಗೆ ನ್ಯಾಯಾಂಗ ಬಂಧನದ ಕೋರ್ಟ್ ಆದೇಶ
- 42 ನೇ ಎಸಿಎಂಎಂ ಕೋರ್ಟ್ ನಿಂದ ಆದೇಶ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಇಂದು ಪ್ರಜ್ವಲ್ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ನ್ಯಾಯಾಲಯ ಸೂಚನೆಯಂತೆ ಮನವಿ ಪತ್ರವನ್ನು ಸಿದ್ಧಪಡಿಸಿ ಪ್ರಜ್ವಲ್ ರೇವಣ್ಣಗೆ ವಕೀಲ ಅರುಣ್ ನೀಡಿದ್ದು, ಜೈಲಿಗೆ ಹೋದಾಗ ಅಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ. ಜೈಲು ಅಧಿಕಾರಿಗಳು ಅವಕಾಶ ನೀಡಿದ್ದಲ್ಲಿ ಅರ್ಜಿ ವಿಚಾರಣೆ ನಡೆಸುತ್ತೇವೆ. ಸೋಮವಾರ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.