- ಸಂಸದ ಪ್ರಜ್ವಲ್ ರೇವಣ್ಣ ನಾಳೆ ಬರುತ್ತಾರೆ ಎನ್ನುವ ಮಾಹಿತಿ ಇದೆ
- ಪ್ರಜ್ವಲ್ ಬಂಧನಕ್ಕೆ ಎಸ್ಐಟಿ ಎಲ್ಲಾ ತಯಾರಿ ಮಾಡಿಕೊಂಡಿದೆ
- ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಅವರನ್ನು ಎಸ್ಐಟಿ ವಶಕ್ಕೆ
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಬರುತ್ತಾರೆ ಎನ್ನುವ ಮಾಹಿತಿ ಇದೆ. ಹೀಗಾಗಿ ಎಸ್ಐಟಿ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರನ್ನು ಎಸ್ಐಟಿ ವಶಕ್ಕೆ ಪಡೆಯಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊರ ದೇಶಕ್ಕೆ ಹೋಗಿ ಅವರನ್ನು ಬಂಧಿಸಲು ಸಾಧ್ಯವಿಲ್ಲ. ಹೊರ ದೇಶದಲ್ಲಿ ಬಂಧನ ಎಂಬುದು ನೆಲಮಂಗಲಕ್ಕೆ ಹೋಗಿ ಬಂಧನ ಮಾಡಿದಷ್ಟು ಸುಲಭವಲ್ಲ. ಕೇಂದ್ರ ಕೂಡ ಬೇರೆ ದೇಶದಲ್ಲಿ ಬಂಧಿಸುವ ಅಧಿಕಾರ ಹೊಂದಿಲ್ಲ. ಇದೇ ಕಾರಣಕ್ಕೆ ಇಂಟರ್ಪೋಲ್ ಇದೆ. ಪ್ರಜ್ವಲ್ ಬರುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾರೆ. ಅವರು ಬಂದರೆ ಎಲ್ಲಾ ಕಾನೂನು ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.
ಪ್ರಜ್ವಲ್ ಬಂಧನಕ್ಕೆ ಈಗಾಗಲೇ ವಾರೆಂಟ್ ಕೂಡ ಜಾರಿಯಾಗಿದ್ದು, ಅವರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್ಐಟಿ ಬಂಧಿಸಲಿದ್ದಾರೆ. ಅವರ ಪಾಸ್ಪೋರ್ಟ್ ರದ್ದತಿಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಕಾನೂನು ಪ್ರಕ್ರಿಯೆ ಅನುಸಾರ ಕಾರ್ಯ ನಿರ್ವಹಿಸಲಿದೆ. ಈ ಬಗ್ಗೆ ಕೇಂದ್ರ ತಿಳಿಸಿದೆ ಎಂದು ಪರಮೇಶ್ವರ್ ಮಾಹಿತಿ ತಿಳಿಸಿದರು.