- ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ
- ಪ್ರೀತಂ ವಿರುದ್ಧ ಪ್ರಜ್ವಲ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ರಿಲೀಸ್ ಮಾಡಿದ್ದು ಯಾರು ಎನ್ನುವುದರ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಕೆಲ ಶಂಕಿತರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದರೆ ಸಂತ್ರಸ್ತ ಮಹಿಳೆಯೊಬ್ಬರು ಖುದ್ದು ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದರು.