- ಜೂನ್ 6 ರವರೆಗೆ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ
- ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯದಿಂದ ಆದೇಶ
ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪ್ರಜ್ವಲ್ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಿನ್ನೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದು, ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅರೆಸ್ಟ್ ಮಾಡಿದ್ದಾರೆ. ಇಂದು ಅವರನ್ನು ವೈದ್ಯಕೀಯ ತಪಾಸಣೆ ಮಾಡಿಸಲಾಯಿತು. ಬಳಿಕ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಸಿದ ನಂತರ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ. ಎಸ್ಐಟಿ ಮನವಿ ಪುರಸ್ಕರಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.