ಬೆಂಗಳೂರು: ಕೋವಿಡ್ ಭ್ರಷ್ಟಾಚಾರಗಳ ಕುರಿತು ಮೈಕಲ್ ಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ ಜಸ್ಟೀಸ್ ಕುನ್ಹಾ ಅವರನ್ನ ಕಾಂಗ್ರೆಸ್ ಏಜೇಂಟ್ ಎಂದು ಕರೆದ ಪ್ರಲ್ಹಾದ್ ಜೋಶಿ ಹೇಳಿಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟೀಸ್ ಕುನ್ಹಾ ಅವರು ಅತ್ಯಂತ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದವರು. ಗೌರವಾನ್ವಿತರ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವಯಕ್ತಿಕ ನಿಂದನೆ ಮಾಡಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪ್ರಲ್ಹಾದ್ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.