ಬೆಂಗಳೂರು: ಮುಂಜಾನೆ ಒಂಬತ್ತು ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂದಿಳಿದಿದ್ದು, ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮಧ್ಯಾಹ್ನ 11 ಗಂಟೆಗೆ ಮಾನನಷ್ಟ ಮೊಕದ್ದಮೆ ವಿಚಾರಣೆ ಎದುರಿಸಲು ಅವರು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಶೇ. 40 ಕಮಿಷನ್, ಪೇ ಸಿಎಂ ಎಂಬ ಜಾಹೀರಾತು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ