- ಇಂದು ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ಮಳೆ ಆರಂಭ
- ಮೇ 18 ರಿಂದ 20ರವರೆಗೂ ಮೈಸೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
- ರಾಜಧಾನಿ ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಇಂದು ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ಮಳೆ ಆರಂಭವಾಗಿದೆ. ಬನಶಂಕರಿ, ಜಯನಗರ, ಶಿವಾಜಿನಗರ, ವಿಧಾನಸೌಧ, ಎಮ್. ಜಿ. ರೋಡ್ ಹೀಗೆ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಈಗಾಗಲೇ ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿತ್ತು. ಇದೆ ಮೇ 18 ರಿಂದ 20ರವರೆಗೂ ಮೈಸೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಕ್ಷಿಣ ಒಳನಾಡು ಭಾಗದಲ್ಲಿ ಭಾಗಾದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ. ಇನ್ನು 18ರಂದು ಆರ್ ಸಿಬಿ ಹಾಗೂ ಸಿಎಸ್ ಕೆ ವಿರುದ್ದ ಪಂದ್ಯ ನಡೆಯಲಿದೆ. ಆದ್ರೆ ರಾಜಧಾನಿ ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.