ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆರಾಯ ಆರ್ಭಟ ಶುರು ಮಾಡಿದ್ದಾನೆ. ಈಗಾಗಲೇ ಭಾರೀ ಮಳೆಯಿಂದ ಕೆಲವೆಡೆ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನವದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಶುಕ್ರವಾರ ಅಲ್ಪ ಸುಧಾರಣೆ ಕಂಡಿದೆ. ಇನ್ನು ಅಕ್ಟೋಬರ್ ಅಂತ್ಯದಲ್ಲಿ ತಾಪಾಮನ ಪ್ರಮಾಣ ಸುಮಾರು 34 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಇದನ್ನು ಓದಿ : ಉಪ್ಪಿ ಪಕ್ಷದಿಂದ ಇಬ್ಬರು ಬೈಎಲೆಕ್ಷನ್ ಕಣಕ್ಕೆ!
ಶನಿವಾರ (ಅಕ್ಟೋಬರ್ 26) ಲಡಾಖ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಭಾನುವಾರ (ಅಕ್ಟೋಬರ್ 27) ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಮತ್ತು ಛತ್ತೀಸ್ಗಢದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದನ್ನು ಓದಿ : ಕಿವೀಸ್ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಹೀನಾಯ ಸೋಲು!
ಹಾಗೆಯೇ ಅದೇ ದಿನ ಅಂದರೆ ನಾಳೆ ಕೇರಳ ಕರಾವಳಿ, ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಲಕ್ಷದ್ವೀಪ, ಅಸ್ಸಾಂ, ಮೇಘಾಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಅರುಣಾಚಲ ಪ್ರದೇಶದಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.