- ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದ ಭಾರೀ ಅವಾಂತರ
- ಮಳೆಯಿಂದಾಗಿ ಮನೆಗಳಿಗೆ ಹಾನಿ, ಕಾರುಗಳು ಜಖಂ
- ಸಿದ್ದರಾಮಯ್ಯ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ನೀಡಬೇಕು
ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಮಳೆಯಿಂದ ಸಾಕಷ್ಟು ಕಡೆ ಮನೆಗಳ ಮೇಲೆ ಮರಗಳು ಬಿದ್ದಿದ್ದು, ಕಾರುಗಳ ಮೇಲೂ ಮರಗಳು ಬಿದ್ದು ಜಖಂ ಆಗಿದೆ. ತೆರವು ಕಾರ್ಯ ಮುಂದುವರಿದಿದ್ದು, ಆದರೆ ಮರ ತೆರವು ಕಾರ್ಯ ಮಾಡುವ ಸಿಬ್ಬಂದಿಯ ಕೊರತೆ ಇದೆ. ಇನ್ನಷ್ಟು ಸಿಬ್ಬಂದಿಯನ್ನು ಬಿಬಿಎಂಪಿ ಬಳಸಿಕೊಳ್ಳಬೇಕು. ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ನೀಡಬೇಕು ಎಂದು ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಹೇಳಿದ್ದಾರೆ.
ಸುಮಾರು 10ಕ್ಕೂ ಹೆಚ್ಚು ಕಡೆ ಮನೆಗಳ ಮೇಲೆ ಮರಗಳು ಬಿದ್ದಿದ್ದು, ಮರಗಳನ್ನು ಬಿಬಿಎಂಪಿ, ಬೆಸ್ಕಾಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ. ಕರ್ನಾಟಕ ಲೇಔಟ್, ಬೆಮೇಲ್ ಲೇಔಟ್, ಕಿರ್ಲೋಸ್ಕರ್ ಕಾಲೋನಿ ಹಾಗೂ ಕುರುಬರಹಳ್ಳಿ ಮೇನ್ ರೋಡ್ ನಲ್ಲಿ ಅಡ್ಡವಾಗಿ ಮರಗಳು ಬಿದ್ದಿವೆ. ಕಮಲ ನಗರದ ವಾಟರ್ ಟ್ಯಾಂಕ್ ಮುಖ್ಯ ರಸ್ತೆಯಲ್ಲಿ ಮರಗಳ ತೆರವು ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲೇ ನಿಂತು ಅಧಿಕಾರಿಗಳಿಗೆ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಸೂಚನೆ ನೀಡಿದರು. ಮರಗಳ ತೆರವು ಕಾರ್ಯ ನಡೆಯುತ್ತಿದ್ದು, ವಾಹನ ಸವಾರರಿಗೆ ಸಂಚಾರ ಮಾಡಲು ಅವಕಾಶ ಮಾಡಿಲಾಗಿದೆ.