ವಾಯುಭಾರ ಕುಸಿತ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ರಾಜ್ಯದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗು ಇಂದಿನಿಂದ 3-4 ದಿನಗಳ ಕಾಲ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿವಾಯುಭಾರ ಕುಸಿತದಿಂದ ಮಳೆ ಆಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದಿನಿಂದ 3 ದಿನಗಳಯ ಹೆಚ್ಚಿನ ಮಳೆ ಆಗುತ್ತದೆ ಎಂದು ತಿಳಿಸಿದೆ.
ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳನ್ನು ಉಂಟುಮಾಡಿದೆ. ಈ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿದೆ.
ರಾಜ್ಯದಲ್ಲಿ ಎಲ್ಲಿ ಎಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಈ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ಹಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಒರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಸಾದಾರಣ ಮಳೆ ಆಗುವ ಸಾಧ್ಯತೆ ಇದೆ. ಡಿಸೆಂಬರ್ 26, 27 ರಂದು ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆ ಕ್ರಮಗಳು
- ಹವಾಮಾನ ಇಲಾಖೆ ಮತ್ತು ಸ್ಥಳೀಯ ಆಡಳಿತಗಳು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನನ್ಉ ಅನುಸರಿಸಲು ಸಲಹೆ ನೀಡಿದೆ.
- ನದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕು
- ಅಗತ್ಯವಿಲ್ಲದೆ ಹೊರಗಡೆ ಹೋಗುವುದನ್ನು ತಪ್ಪಿಸಲು ಪ್ರಯತ್ನಿಸಬೇಕು
- ವಾಹನ ಸವಾರರು ಮಳೆಯ ಸಮಯದಲ್ಲಿ ಸುರಕ್ಷಿತವಾಗಿ ಚಾಲನೆ ಮಾಡಬೇಕು
- ಸ್ಥಳೀಯ ಆಡಳಿತಗಳ ಸೂಚನೆಗಳನ್ನು ಪಾಲಿಸಬೇಕು