- ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 2 ದಿನಗಳ ಕಾಲ ಭರ್ಜರಿ ಮಳೆ
- ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 2 ದಿನಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಇಡೀ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ತಿಳಿದು ಬಂದಿದೆ.
ಬೆಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು, ಸಿಲಿಕಾನ್ ಸಿಟಿ ಮಂದಿಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಮಳೆ ಅಬ್ಬರ ಶುರುವಾಯಿತು. ಮೆಜೆಸ್ಟಿಕ್, ಡೈರಿ ಸರ್ಕಲ್, ಮಾರ್ಕೆಟ್, ಜಯನಗರ, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಬನಶಂಕರಿ, ಬೆಳ್ಳಂದೂರು, ಇಂದಿರಾನಗರ, ವಿಜಯನಗರ, ಹೆಬ್ಬಾಳ, ಆರ್ಆರ್ ನಗರ, ಯಶವಂತಪುರ, ಚಾಮರಾಜಪೇಟೆ, ಜೆಪಿ ನಗರ, ಕೋರಮಂಗಲ, ಜಯನಗರ ಸೇರಿದಂತೆ ಇನ್ನೂ ಅನೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ.