ಉದ್ಯಾನ ನಗರಿ ಬೆಂಗಳೂರಲ್ಲಿ ಭರ್ಜರಿ ಮಳೆ
ಸಿಲಿಕಾನ್ ಸಿಟಿಯಲ್ಲಿ ಮಳೆಯ ಅವಾಂತರ..!
ರಣ ಬಿಸಿಲಿಗೆ ತತ್ತರಿಸಿ ಹೋಗಿದ್ದ ಬೆಂಗಳೂರಿಗರು ದಿಢೀರ್ ಮಳೆ ನೋಡಿ ಫುಲ್ ಖುಷಿಯಾಗಿದ್ದಾರೆ. ಮಳೆರಾಯನ ಎಂಟ್ರಿಯಿಂದ ಸಿಲಿಕಾನ್ ಸಿಟಿ ಮಂದಿ ಹೀಗೆ ಹೆಚ್ಚು ಮಳೆ ಸುರಿಯಲಿ ಎಂದು ಬೇಡಿಕೊಳ್ಳುತ್ತಿದ್ದಾರೆ.
ನಿನ್ನೆ ಸಂಜೆಯು ನಗರದ ಹಲವೆಡೆ ತುಂತುರು ಮಳೆಯಾಗಿತ್ತು. ಇಂದು ಬೆಂಗಳೂರು ನಗರದ ಹಲವಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ ಉದ್ಯಾನನಗರಿ ಫುಲ್ ಕೂಲ್ ಆಗಿದೆ. ಬೆಂಗಳೂರು ಉತ್ತರ, ದಕ್ಷಿಣ ಭಾಗದ ಹಲವೆಡೆ ತುಂತುರು ಮಳೆಯಾಗಿದೆ.
ಮಧ್ಯಾಹ್ನವೇ ಆರಂಭವಾಗಿರುವ ಭರ್ಜರಿ ಮಳೆಯಿಂದ ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ರೇಸ್ ಕೋರ್ಸ್ ಸೇರಿ ಹಲವೆಡೆ ಮಳೆ ಸುರಿದಿದೆ. ಈ ಭಾಗದಲ್ಲಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ಮೋಡ ಕವಿದ ವಾತಾವರಣ ಮುಂದುವರಿದಿದ್ದು ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ.