ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆಷ್ಟೇ ರಾಜ್ಯದಲ್ಲಿ ಮಳೆಯಾಗಿತ್ತು. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ.
ಯಶವಂತಪುರ, ಮತ್ತಿಕೆರೆ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೈಕ್ ಸವಾರರು ಹೈರಾಣಾಗಿದ್ದಾರೆ. ಮಳೆರಾಯನ ಅಬ್ಬರದಿಂದ ಸಿಲಿಕಾನ್ ಸಿಟಿ ಈಗ ಕೂಲ್ ಕೂಲ್ ಆಗಿದೆ…