ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು ನಗರದ ಅಂತರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಆಗಿದೆ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಬೆಂಗಳೂರು ನಾಯಕರ ತಂಡವು ಮನವಿ ಸಲ್ಲಿಕೆ ಮಾಡಿದೆ.
ಇನ್ನು ಈ ವೇಳೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್,ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ ಎಂ ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.