ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್ಗಳಲ್ಲಿ ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರು ಮನವಿ ಮಾಡಿದ್ದರು.
ತನಿಖೆ ನಡೆಯಲಿ, ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹೊಳೆನರಸೀಪುರ ಪ್ರಕರಣದಲ್ಲಿ ಎರಡೂ ವಾರಗಳ ಕಾಲ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್ಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು.