ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ 09 ರಿಂದ 14 ರವರೆಗೆ ನಡೆಯಲಿದೆ. ಈ ಸಂಬಂಧ ಪರೀಕ್ಷಾ ಕೇಂದ್ರ ಸುತ್ತಮುತ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರ ಸುತ್ತಮುತ್ತಲು ಇರುವ ಜೆರಾಕ್ಸ್ ಮತ್ತು ಪುಸ್ತಕ ಅಂಗಡಿಗಳನ್ನು ಪರೀಕ್ಷಾ ವೇಳೆಯಲ್ಲಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.