- ರೇಣುಕಾಸ್ವಾಮಿ ಸಾಯುವ ಮುನ್ನ ಚಿತ್ರಹಿಂಸೆ ಕೊಟ್ಟ ದರ್ಶನ್ ಮತ್ತು ಗ್ಯಾಂಗ್
- ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣ ಸಂಬಂಧ ಅನೇಕ ಬೀಕರ ಅಂಶಗಳು ಹೊರಬರುತ್ತಿವೆ. ಕೊಲೆ ಪ್ರಕರಣ ತನಿಖೆ ಚುರುಕುಗೊಂಡಂತೆ ರೇಣುಕಾಸ್ವಾಮಿ ಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲಾ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ. ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಿಚಾರಣೆಯಲ್ಲಿ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಗೆ ನೀಡಿದ್ದ ಚಿತ್ರಹಿಂಸೆಯ ವಿವರ ಹೊರಬಿದ್ದಿದೆ.
ದರ್ಶನ್ ಮತ್ತು ಗ್ಯಾಂಗ್ ಅನ್ನು ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಈ ಪ್ರಕರಣ ಸಂಬಂಧ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿದ್ದರು. ರೇಣುಕಾಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು.
ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್ ಕ್ರೂರತೆಯ ಬಗ್ಗೆ ಸಣ್ಣ ಸುಳಿವನ್ನು ನೀಡಿದ ಪ್ರಸನ್ನಕುಮಾರ್ ಅವರು ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ. ಆ ಕರೆಂಟ್ ಶಾಕ್ ನೀಡಿದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು. ಮೈಸೂರಿನಲ್ಲಿ ಕೆಲವು ಕಡೆ ಆರೋಪಿಗಳೊಂದಿಗೆ ಮಹಜರು ಮಾಡಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ವಶಪಡಿಸಿಕೊಳ್ಳಬೇಕಿದೆ ಎಂದು ವಾದಿಸಿದ್ದಾರೆ.