ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಗೆ ನಿರಾಶೆಯಾಗಿದ್ದು ಇವರ ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿದರು. ಇಂದು SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ.
ಇನ್ನುಳಿದಂತೆ ನಟ ದರ್ಶನ್, ಪವಿತ್ರಾಗೌಡ, ಎ11 ನಾಗರಾಜು, ಎ12 ಲಕ್ಷ್ಮಣ್ ಜಾಮೀನು ಅರ್ಜಿ ವಜಾಗೊಂಡಿದೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.