- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ
- ವಿಶೇಷ ಪ್ರಾಸಿಕ್ಯೂಟರ್ ಆಗಿ ಪಿ. ಪ್ರಸನ್ನ ಕುಮಾರ್ ಅವರನ್ನು ನೇಮಕ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಗೌಡ ಹಾಗೂ ಅವರ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ತನಿಖೆ ಚುರುಕುಗೊಂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ. ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ.
ನಟ ದರ್ಶನ್ ಪ್ರಕರಣ ರಾಜ್ಯದಾದ್ಯಂತ ಸಂಚಲನ ಉಂಟು ಮಾಡಿರುವ ಈ ಪ್ರಕರಣದಲ್ಲಿ ಪ್ರಸನ್ನ ಕುಮಾರ್ ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್ನಲ್ಲಿ ವಿಶೇಷ ಪ್ರಾಸಿಕ್ಯೂಟರ್ ಆಗಿ ಪ್ರಕರಣವನ್ನು ಪ್ರತಿನಿಧಿಸಲಿದ್ದಾರೆ. ಹೈಕೋರ್ಟ್ ವಕೀಲ ಸಿ. ಸಚಿನ್ ಅವರನ್ನು ಸಹಾಯಕ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಲಾಗಿದೆ.