ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಶಿಫಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಸಿದ್ಧಿಕ್ ಅಲ್ದೂರಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ಅಗತ್ಯವಾದ ನೆರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸುವುದಾಗಿ ಭರವಸೆ ನೀಡಿದರು. ವಸತಿ ಸಚಿವ ಜಮೀರ್ ಅಹಮದ್ ಅವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್ ಅವರು ಜೊತೆಗಿದ್ದರು.
ಪ್ರಭಾಕರ್ ಅವರು ವೈದ್ಯಕೀಯ ವೆಚ್ಚ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ. ಜತೆಗೆ ವರದಿಗಾರರ ಕೂಟ, ಪ್ರೆಸ್ ಕ್ಲಬ್ ಮೂಲಕವು ನೆರವಿಗೆ ಪ್ರಯತ್ನಿಸಲಾಗುತ್ತಿದೆ.