ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯನ್ನಾಗಿ ಡಾ. ವಸಂತ ಮುರುಳಿ ಅವರನ್ನು ನೇಮಿಸಲಾಗಿದೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ಅವರು ವಸಂತ ಮುರಳಿ ಅವರನ್ನು ನೇಮಿಸಿ ಅದೇಶಿಸಿದ್ದಾರೆ.
ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ ಸಮಾಜಿಕವಾಗಿ ಶೈಕ್ಷಣಿಕ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯ ವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ದುಡಿಯುವಂತೆ ನೇಮಕಾತಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಡಾ. ವಸಂತ ಮುರುಳಿ ಅಖಿಲ ಕರ್ನಾಟಕ ವಿಶ್ವ ಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.