ಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 27ರಂದು ನಡೆಸಲಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ನಿನ್ನೆ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ಉಗ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಲಾಗಿತ್ತು. ವಿದ್ಯಾರ್ಥಿಗಳ ಬಂಧನ ಖಂಡಿಸಿ ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವಿಜಯನಗರ ಠಾಣೆ ಎದುರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ನಡೆದ ತಳ್ಳಾಟ-ನೂಕಾಟದಲ್ಲಿ ಓರ್ವ ಅಭ್ಯರ್ಥಿ ತಲೆಗೆ ಗಾಯವಾಗಿದೆ. ಕೂಡಲೇ ಗಾಯಗೊಂಡ ಅಭ್ಯರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮುನಿರಾಜು ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.